ಮಂಗಳೂರು, ಮಾ 17 ( Daijiworld News/MSP): ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹಬ್ಬಲಾರಂಭಿಸಿದ್ದು, ಸೋಂಕು ಪೀಡಿತ ಸಂಖ್ಯೆ ಶತಕ ದಾಟಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಇನ್ನು ಕರಾವಳಿಯಲ್ಲೂ ಶಂಕಿತ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹಲವು ವಿಮಾನಯಾನ ಸೇವೆಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಸ್ಪಷ್ಟಪಡಿಸಿರುವ ಏರ್ ಇಂಡಿಯಾದ ಮಂಗಳೂರು ವಿಭಾಗದ ಅಧಿಕಾರಿ "ಭಾರತ ಸರಕಾರದ ಸೂಚನೆಯ ಮೇರೆಗೆ ಹಲವು ವಿಮಾನ ಯಾನ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸೌದಿ ಅರೇಬಿಯಾ, ಕುವೈತ್, ಕತಾರ್ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನಯಾನ ಸೇವೆ ಸ್ಥಗಿತಗೊಳಿಸಲಾಗಿದೆ" ಎಂದು ಹೇಳಿದ್ದಾರೆ.
ಆದರೂ, ದುಬೈ, ಅಬುಧಾಬಿ, ಮಸ್ಕತ್ಗೆ ಏರ್ ಇಂಡಿಯಾ ಸಂಸ್ಥೆಯ ವಿಮಾನ ಸೇವೆ ಎಂದಿನಂತೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.