ವಿಟ್ಲ, ಮಾ.19 (Daijiworld News/MB) : ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಆರೋಪದಲ್ಲಿ ಪೆರುವಾಯಿಯಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿ ತಂದೆ ಮೂರು ವರ್ಷಗಳಿಂದ ತನ್ನ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅತ್ಯಾಚಾರವೆಸಗಿದ್ದು ಬಾಲಕಿ ಅದರಿಂದಾಗಿ ಅಸ್ವಸ್ಥಳಾಗಿದ್ದಳು. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆಸ್ಪತ್ರೆಯಲ್ಲಿ ತನ್ನ ತಂದೆ ಅತ್ಯಾಚಾರ ಮಾಡುತ್ತಿದ್ದ ವಿಷಯವನ್ನು ಬಾಲಕಿ ತಿಳಿಸಿದ್ದು ಆ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.