ಮಂಗಳೂರು, ಮಾ.19 (DaijiworldNews/PY) : ಕೊರೊನಾ ವೈರಸ್ ಹರಡದಂತೆ ಹಿನ್ನೆಲೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಆರಂಭಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ಜೆಲ್ಲೆಯ ಹಲವೆಡೆಗಳಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ದಿನಂಪ್ರತಿ ನೂರಾರು ಜನ ಭೇಟಿ ನೀಡುತ್ತಾರೆ. ಜಿಲ್ಲೆಯಲ್ಲಿ ಸದ್ಯ ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲವಾದರೂ ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆ ಆರಂಭವಾಗಿದೆ.
ಕೊರೊನಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿದ್ದಾರೆ. ಈವರೆಗೆ 55,241 ಮನೆಗಳಿಗೆ ಭೇಟಿ ನೀಡಿದ್ದು, 2,12,639 ಮಂದಿಯನ್ನು ಸಂಪರ್ಕಿಸಿ ಆ ಮೂಲಕ ಜಾಗೃತಿಯನ್ನು ಮೂಡಿಸುವ ಕಾರ್ಯ ಮಾಡಿದ್ದಾರೆ ಹಾಗೂ ವಿದೇಶದಿಂದ ಬಂದ ಪ್ರಯಾಣಿಕರನ್ನು ಮನೆಯಲ್ಲಿಯೇ ಇರುವಂತೆ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170ಕ್ಕೆ ಏರಿದ್ದು, ಕರ್ನಾಟಕದಲ್ಲಿ 15 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.