ಕಾಸರಗೋಡು, ಮಾ 19 (DaijiworldNews/SM): ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಈ ಮೂಲಕ ಕಾಸರಗೋಡಿನಲ್ಲಿ ೩ನೇ ಸೋಂಕು ದೃಢಪಟ್ಟಂತಾಗಿದೆ.
ದುಬೈಯಿಂದ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕು ತಗುಲಿದ ವ್ಯಕ್ತಿಗೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕಾಸರಗೋಡು ಜಿಲ್ಲೆಯಲ್ಲಿ 546 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. 9 ಮಂದಿಗೆ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಟಲು ದ್ರವ ಹಾಗೂ ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಇನ್ನು ಜಿಲ್ಲೆಯಾದ್ಯಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.