ಉಪ್ಪಿನಂಗಡಿ, ಮಾ 20 ( Daijiworld News/MSP): ಬೆಂಗಳೂರು– ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಸಮೀಪದ ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ನಡೆದಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಬಳಿಯ ಲಾವತಡ್ಕ ಸಮೀಪದಲ್ಲಿ ಶುಕ್ರವಾರ ಮಧ್ಯಾಹ್ನ ಎಲ್ಪಿಜಿ ಅನಿಲ ಸಾಗಣೆ ಟ್ಯಾಂಕರ್ ಉರುಳಿಬಿದ್ದಿದೆ. ಘಟನೆಯಿಂದ ಟ್ಯಾಂಕರ್ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಂಕರ್ ತೆರವು ಕಾರ್ಯಚರಣೆ ನಡೆಸಲಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು , ರಸ್ತೆ ಸಂಚಾರಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬುದಾಗಿ ಪೊಲೀಸರಿಂದ ಮಾಹಿತಿ ನೀಡಿದ್ದಾರೆ.
ಈ ಹಿಂದೆಯೂ ಲಾವತಡ್ಕದಲ್ಲಿ ಅನಿಲ ಟ್ಯಾಂಕರ್ ಗಳು ಉರುಳಿಬಿದ್ದ ಉದಾಹರಣೆಗಳಿವೆ.