ಮಂಗಳೂರು, ಮಾ.20 (DaijiworldNews/PY) : ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಮಾರಣಾಂತಿಕ ಸೋಂಕು ವೈರಾಣು ರಾಜ್ಯದಲ್ಲಿಯೂ ಕಾಣಿಸಿಕೊಂಡಿರುವುದರಿಂದ ಈ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮನಪಾ ವ್ಯಾಪ್ತಿಯೊಳಗೆ ಕಾರ್ಯಚರಿಸುವ ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್ಗಳನ್ನು ಮಾ.21ರಿಂದ ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಮುಚ್ಚುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಕುರಿತು ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್ ಅಸೋಸಿಯೇಷನ್ಗಳು ಗಮನಹರಿಸಿ ಮಾ.21ರಿಂದ ಸೆಲೂನ್, ಬ್ಯೂಟಿ ಪಾರ್ಲರ್ಗಳನ್ನು ಮುಚ್ಚಿ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು ಮನಪಾ ಆಯುಕ್ತರು ಹೇಳಿದ್ಧಾರೆ.