ಮಂಗಳೂರು, ಮಾ.22 (DaijiworldNews/PY) : ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂಗೆ ಕರೆಕೊಟ್ಟಿದ್ದು, ಕೊರೊನಾ ವೈರಸ್ ತಡೆಗಟ್ಟಲು ಶ್ರಮಿಸುತ್ತಿರುವ ವೈದ್ಯರು ಮೊದಲಾದವರಿಗೆ ಕೃತಜ್ಞತಾ ಪೂರ್ವಕವಾಗಿ ಸಂಜೆ 5 ಗಂಟೆಗೆ ಸರಿಯಾಗಿ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸುವಂತೆ ತಿಳಿಸಿದ್ದು, ಮಂಗಳೂರಿನ ಅನೇಕ ಕಡೆಗಳಲ್ಲಿ, ಮನೆಗಳ ಬಾಲ್ಕನಿಗಳಲ್ಲಿ ನಿಂತು ಜನರು ಚಪ್ಪಾಳೆ ತಟ್ಟಿದ್ದಾರೆ.
ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು ಎಲ್ಲಾ ಚರ್ಚ್ಗಳಲ್ಲಿ ಏಕಕಾಲದಲ್ಲಿ ಗಂಟೆ ಬಾರಿಸುವ ಮುಖಾಂತರ ಅಭಿನಂದನೆ ಸಲ್ಲಿಸಲಾಗುವುದು ಎಂದು ಶನಿವಾರ ತಿಳಿಸಿದ್ದು, ಇಂದು ಸಂಜೆ 5 ಗಂಟೆಗೆ ಸರಿಯಾಗಿ ಚರ್ಚ್ಗಳಲ್ಲಿ ಗಂಟೆ ಬಾರಿಸುವ ಮೂಲಕ ಅಭಿನಂದನೆ ಸಲ್ಲಿಸಿದ್ದು, ದೇವಸ್ಥಾನಗಳಲ್ಲೂ ಗಂಟೆ ಬಾರಿಸುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭ, ಶ್ರೀ ಧಾಮ ಮಾಣಿಲ, ಉಡುಪಿಯ ಶ್ರೀ ಕೃಷ್ಣ ಮಠದ ಶ್ರೀ ಇಷ್ಟತೀರ್ಥ ಸ್ವಾಮೀಜಿ ಅವರು ಗಂಟೆ ಬಾರಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.