ಮಂಗಳೂರು, ಮಾ.22 (DaijiworldNews/PY) : ಸರ್ಕಾರದ ಆದೇಶದಂತೆ ಕೊರೊನಾ ವೈರಸ್ ಎದುರಿಸುವ ನಿಟ್ಟಿನಲ್ಲಿ ಮಾ.31ರವರೆಗೆ ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳ ಸೇವೆ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ತಿಳಿಸಿದ್ದಾರೆ.
ಈ ಕ್ರಮ ಜಿಲ್ಲಾಡಳಿತ ಸೂಚನೆಯ ಮೇರೆಗೆ ಜರುಗಿಸಲಾಗಿದೆ. ಬಸ್ ಸಂಚಾರದ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.