ಕಾಸರಗೋಡು, ಮಾ.22 (DaijiworldNews/PY) : ಕೊರೊನಾ ವೈರಸ್ ಕಾಸರಗೋಡಿನಲ್ಲಿ ವ್ಯಾಪಿಸುತ್ತಿದ್ದು, ಭಾನುವಾರ ಮತ್ತೆ ಐವರಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಕಾಸರಗೋಡು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ಅವಧಿಯಲ್ಲಿ ಒಟ್ಟು 17 ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ. ಕೇರಳದಲ್ಲಿ ಭಾನುವಾರ ಒಟ್ಟು 15 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿವರೆಗೆ ಒಟ್ಟು 64 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.