ಮಂಗಳೂರು, ಫೆ 24: ರಾಜ್ಯ ಕೆಎಸ್ಆರ್ಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹೊಸ ಪ್ರಕಟಣೆಯನ್ನು ಹೊರಡಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಇದೇ ಮಾರ್ಚ್ 1 ರಿಂದ ಪ್ರಾರಂಭವಾಗುತ್ತಿದ್ದು, ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇದ್ದ ದಿನ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕೆಎಸ್ಆರ್ಟಿಸಿ ಮುಖ್ಯ ವಸ್ಯವಸ್ಥಾಪಕರು ಹೀಗೊಂದು ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.