ನವದೆಹಲಿ, ಫೆ 24: ಸಾರ್ವಜನಿಕ ಹಣವನ್ನು ಲೂಟಿ ಮಾಡಲು ನಾನು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ನೀರವ್ ಮೋದಿ 11 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿದ್ದಾರೆ. ಆರ್ಥಿಕ ಅಪರಾಧಗಳ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ವ್ಯವಸ್ಥೆ ಸಾರ್ವಜನಿಕರ ಹಣವನ್ನು ಲೂಟಿ ಮಾಡಲು ಬಿಡುವುದಿಲ್ಲ ಎಂದು ತಿಳಿದ್ದಾರೆ.
ನೀತಿ ಹಾಗೂ ನಿಯಮಗಳನ್ನು ರೂಪಿಸುವವರು ತಮ್ಮ ಕೆಲಸಗಳನ್ನು ಶ್ರದ್ಧೆಯಿಂದ ಮಾಡಬೇಕು. ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳು ಇದನ್ನು ಮತ್ತಷ್ಟು ವಿಶೇಷವಾಗಿ ಪಾಲಿಸಬೇಕೆಂದು ಇದೇ ವೇಳೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.