ಮಂಗಳೂರು, ಮಾ 25 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ನಿಂಯಂತ್ರಣದಲ್ಲಿದ್ದು, ಬುಧವಾರದಂದು ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಆ ಮೂಲಕ ದ.ಕ. ಕನ್ನಡ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದ್ದು, ಆದೇಶ ಎಂದಿನಂತೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬುಧವಾರದಂದು ಒಟ್ಟು 14 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು 7 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ. ಇನ್ನು ಇಂದು ಸುಮಾರು 10 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಎದುರು ನೋಡಲಾಗುತ್ತಿದೆ.
ಇನ್ನು ಇಂದು 20 ಮಂದಿ 28 ದಿನಗಳ ಕಾಲದ ಹೋಂ ಕ್ವಾರೆಂಟಿನ್ ಮುಗಿಸಿದ್ದಾರೆ. ಇನ್ನು ಇಂದು ಸುಮಾರು 27 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. 2771 ಮಂದಿ ಮನೆಯಲ್ಲೇ ನಿಗಾದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ನಿಗಾ ವಹಿಸಲಾಗಿದೆ.