ಮಂಗಳೂರು, ಮಾ 26 (DaijiworldNews/SM): ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಅವರ ಸ್ಥಾನಕ್ಕೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸದಾಶಿವ ಅವರನ್ನು ನಿಯುಕ್ತಿಗೊಳಿಸಲಾಗಿದೆ. ವರ್ಗಾವಣೆಗೊಂಡ ರಾಜೇಶ್ವರಿ ದೇವಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಸಾರ್ವಜನಿಕ ಹಿತದೃಷ್ಠಿಯಿಂದ ವರ್ಗಾವಣೆಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.