ಉಡುಪಿ, ಮಾ.27 (Daijiworld News/MB) : ಎಲ್ಲರೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು, ಇಲ್ಲವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ತಿಳಿಸಿದ್ದಾರೆ.
ಅಗತ್ಯ ಸಾಮಾಗ್ರಿಗಳನ್ನು ಖರೀದಿ ಮಾಡುವ ಸಂದರ್ಭದಲ್ಲಿ ಕೆಲವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಿಲ್ಲ. ಈಗಾಗಲೇ ಅಂಗಡಿ ಮಾಲಿಕರು ಈ ಬಗ್ಗೆ ಗಮನ ವಹಿಸಿ, ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸ್ಥಳದಲ್ಲಿ ಗುರುತು ಮಾಡುವಂತೆ ತಿಳಿಸಿದ್ದೇನೆ. ಯಾರೂ ಇದನ್ನು ಪಾಲಿಸುವುದಿಲ್ಲ ಆ ಅಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಂಗಡಿ ಮಾಲಿಕರು ಹಾಗೂ ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂಬುದು ನನ್ನ ಮನವಿ ಎಂದರು.