ಕಡಬ, ಮಾ 27 (Daijiworld News/MSP): ರಕ್ತದೊತ್ತಡ ಕಡಿಮೆ ಆದ ಹಿನ್ನಲೆಯಲ್ಲಿ ದಿಢೀರ್ ಅಸ್ವಸ್ಥಗೊಂಡ ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ ಶುಕ್ರವಾರದಂದು ಕಡಬದಲ್ಲಿ ನಡೆದಿದೆ.
ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ಅವರು ಅಸ್ವಸ್ಥಗೊಂಡಿದ್ದರು.
ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿದೆ. ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ರವಾನಿಸಲಾಗಿದೆ.
ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.
ಶಾಸಕ ಎಸ್.ಅಂಗಾರ ಅವರಿಗೆ ಹೃದಯಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆ ಇಲ್ಲ. ರಕ್ತದೊತ್ತಡ ಸುಸ್ಥಿತಿಗೆ ಮರಳಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅಸ್ವಸ್ಥತೆ ಉಂಟಾಗಿತ್ತು. ಉದರ ರೋಗಗಳ ತಜ್ಞರು ಚಿಕಿತ್ಸೆ ಆರಂಭಿಸಿದ್ದಾರೆ. ಯಾವುದೇ ರೀತಿಯ ಭಯ ಇಲ್ಲ ಎಂದು ಮಂಗಳೂರು ಕೆಎಂಸಿ (ಜ್ಯೋತಿ) ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ತಿಳಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.