ಮಂಗಳೂರು, ಮಾ 28 (Daijiworld News/MSP): ಕೋವಿಡ್-19 ತಡೆಗಟ್ಟುವ ಸಲುವಾಗಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಲ್ಲಿ ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮಧ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ . ಮಾತ್ರವಲ್ಲದೆ ಎಲ್ಲಾ ರೀತಿಯ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಇಂತಹ ಸಮಯದಲ್ಲಿ ಅಲ್ಲಲ್ಲಿ ಅಕ್ರಮ ಮದ್ಯ ಮಾರಾಟ ಕಂಡು ಬಂದರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಮದ್ಯ,ನಕಲಿ ಮದ್ಯ, ಕಳ್ಳಭಟ್ಟಿ, ಸೇಂದಿಯನ್ನು ತಯಾರಿಸಿ ಮಾರಾಟ ಮಾಡುವುದು ಕಂಡು ಬಂದರೆ ಈ ಕೆಳಕಂಡ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಸಂಪರ್ಕಿಸಬೇಕಾದ ಆಯಾ ತಾಲೂಕು ಅಬಕಾರಿ ನಿರೀಕ್ಷಕರು ಹಾಗೂ ಅವರ ದೂರವಾಣಿ ಸಂಖ್ಯೆ ವಿವರ ಇಂತಿದೆ.