ಮಂಗಳೂರು, ಸೆ18: ರಾಜ್ಯದ ಜನತೆಗೆ ಬಿಜೆಪಿ ಸುಳ್ಳು ಆರೋಪ ಮಾಡುವ ಮೂಲಕ ವಂಚಿಸುತ್ತಿದ್ದಾರೆ. ಸಚಿವ ಕೆ.ಜೆ ಜಾರ್ಜ್ ಅವರ ರಾಜೀನಾಮೆ ಕೇಳುವ ಯಾವುದೇ ನೈತಿಕತೆ ಬಿಜೆಪಿ ಮುಖಂಡರಿಗೆ ಇಲ್ಲ ಎಂದು ಸಚಿವ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸರ್ಕ್ಯೂಟ್ ಹೌಸ್ ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಕೆ.ಜೆ ಜಾರ್ಜ್ ಮೇಲೆ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದ್ದು, ರಾಜೀನಾಮೆಗೆ ಒತ್ತಾಯಿಸುತ್ತಿದೆ. ಚುನಾವಣೆ ಹತ್ತಿರ ಬರುವಾಗ ಜನರನ್ನು ಗೊಂದಲಗೊಳಿಸಿ ರಾಜಕೀಯದಾಟ ನಡೆಸುವ ಹುನ್ನಾರ ಬಿಜೆಪಿ ಮಾಡುತ್ತಿದೆ. ಜನರ ಮಧ್ಯೆ ಧರ್ಮದ ಹೆಸರು ತಂದು ಗೊಂದಲಕ್ಕೆ ಸಿಲುಕಿಸುತ್ತಿದ್ದಾರೆ. ಸುಳ್ಳು ಆರೋಪಗಳನ್ನು ಹೊರಿಸಿ, ಸಚಿವ ಜಾರ್ಜ್ ರಾಜಿನಾಮೆ ಕೇಳುವ ಯಾವುದೇ ನೈತಿಕತೆ ಬಿಜೆಪಿಗೆ ಇಲ್ಲ ಎಂದು ತಿಳಿಸಿದರು.