ಮಂಗಳೂರು ಮಾ 30 (Daijiworld News/MSP): ಲಾಕ್ ಡೌನ್ ಆದೇಶ ಉಲ್ಲಂಘಿಸಿ ನಗರದಲ್ಲಿ ರಸ್ತೆಗಿಳಿದ ಸುಮಾರು 50 ಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಈ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತ ಹರ್ಷ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ,, "ಲಾಕ್ ಡೌನ್ ಉಲ್ಲಂಘಿಸಿದವರ 50 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಸುರಕ್ಷಿತರಾಗಿ ಮನೆಯಲ್ಲಿಯೇ ಇರಿ ಇದು ಬಿಟ್ಟು ಲಾಕ್ ಡೌನ್ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಲಾಕ್ ಡೌನ್ ಸೂಚನೆಗಳನ್ನು ಪಾಲಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ" ಎಂದು ಬರೆದುಕೊಂಡಿದ್ದಾರೆ
ಉಲ್ಲಂಘಿಸುವವರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಪೊಲೀಸರು ಈ ಹಿಂದೆ ಎಚ್ಚರಿಸಿದ್ದರು. ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಮಂಗಳೂರು ಎರಡು ದಿನಗಳಿಂದ ಸಂಪೂರ್ಣ ಲಾಕ್ಡೌನ್ ಸ್ಥಿತಿಯಲ್ಲಿದೆ.