ಕಾಸರಗೋಡು, ಮಾ 30 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದ್ದು, ಮಾರ್ಚ್ 30ರ ಸೋಮವಾರದಂದು ಮತ್ತೆ ಹದಿನೇಳು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ.
ರವಿವಾರದಂದು ಜಿಲ್ಲೆಯಲ್ಲಿ ಏಳು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಆದರೆ, ಮಂಗಳವಾರ ಮತ್ತೆ ಹದಿನೇಳು ಮಂದಿಯಲ್ಲಿ ಪತ್ತೆಯಾಗುವ ಮೂಲಕ ಆತಂಕಕ್ಕೆ ಕಾರಣವಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 106ಕ್ಕೇರಿಕೆಯಾಗಿದೆ.
ಇನ್ನು ಕೇರಳದಲ್ಲಿ 32 ಹೊಸ ಪ್ರಕರಣಗಳು ಇಂದು ಪತ್ತೆಯಾಗಿವೆ. ಇಲ್ಲಿಯ ತನಕ ಪತ್ತೆಯಾಗಿರುವ ಸೋಂಕಿತರ ಪೈಕಿ ಹೆಚ್ಚಿನವರು ವಿದೇಶದಿಂದ ಬಂದವರಾಗಿದ್ದಾರೆ. ಇನ್ನು ಇಲ್ಲಿಯ ತನಕ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇವುಗಳ ಪೈಕಿ ಅರ್ಧದಷ್ಟು ಮಂದಿ ಕಾಸರಗೋಡು ಜಿಲ್ಲೆಯವರಾಗಿದ್ದಾರೆ.
ಕಾಸರಗೋಡು ಸೇರಿದಂತೆ ಕೇರಳದೆಲ್ಲೆಡೆ ತೀವ್ರ ನಿಗಾ ವಹಿಸಲಾಗಿದ್ದು, ಸೋಂಕು ನಿಯಂತ್ರಣಕ್ಕೆ ಹಲವು ರೀತಿಯಲ್ಲಿ ಪ್ರಯತ್ನಗಳು ಮುಂದುವರೆದಿದೆ.