ಮಂಗಳೂರು,ಮಾ 31 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೮ ಕ್ಕೇರಿದೆ. ರಾಜ್ಯದಲ್ಲಿ ಸೋಮವಾರ ಸಂಜೆಯಿಂದ ಇಂದು ಬೆಳಗ್ಗೆ 8 ಗಂಟೆಯವರೆಗೆ ಒಟ್ಟು 10 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ದ.ಕ ಉ.ಕನ್ನಡ ಚಿಕ್ಕಬಳ್ಳಾಪುರ ಒಬ್ಬರಿಗೆ ಬೆಂಗಳೂರು ಹಾಗು ಮೈಸೂರಿನಲ್ಲಿ ತಲಾ ಇಬ್ಬರಲ್ಲಿ ಪತ್ತೆಯಾಗಿದೆ
ದುಬೈನಿಂದ ಮಾ.೧೮ ರಂದು ಭಾರತಕ್ಕೆ ಹಿಂತಿರುಗಿದ್ದ ಸುಳ್ಯ ಮೂಲದ 34 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಐಸೊಲೇಶನ್ ವಾರ್ಡ್ ನಲ್ಲಿ ಇರಿಸಲಾಗಿತ್ತು. ಈತನ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು ಮಂಗಳವಾರ ಬೆಳಗ್ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಈ ಹಿನ್ನಲೆಯಲ್ಲಿ ಆತನನ್ನು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಮನೆಯವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.