ಕಾಸರಗೋಡು, ಮಾ 31 (DaijiworldNews/SM): ನಿರಂತರವಾಗಿ ಏರಿಕೆಯಾಗುತ್ತಿದ್ದ ಕೊರೊನಾ ಪಾಸಿಟಿವ ಪ್ರಕರಣಗಳಿಗೆ ಬ್ರೇಕ್ ಬಿದ್ದಿದ್ದು, ಮಂಗಳವಾರದಂದು ಕೇವಲ 2 ಪಾಸಿಟಿವ್ ಪ್ರಕರಣಗಳು ಮಾತ್ರವೇ ದೃಢಪಟ್ಟಿವೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಎರಡು ಕೊರೋನಾ ಸೋಂಕು ದ್ರಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 106ಕ್ಕೇರಿದೆ. ಇವರು ಇಬ್ಬರು ನಗರದ ತಳಂಗರೆಯ ಮಹಿಳೆಯರಾಗಿದ್ದು, 56 ಮತ್ತು 23 ವಯಸ್ಸಿನವರಾಗಿದ್ದಾರೆ. ಇಬ್ಬರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗಳಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ ಇಂದು ರಾಜ್ಯದಲ್ಲಿ ಏಳು ಪ್ರಕರಣಗಳು ಪತ್ತೆಯಾಗಿದೆ.
ತಿರುವನಂತಪುರ, ಕಾಸರಗೋಡು ತಲಾ ಎರಡು, ಕೊಲ್ಲಂ, ತ್ರಿಶೂರು, ಕಣ್ಣೂರು ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಕೇರಳದಲ್ಲಿ ಸೋಂಕಿತರ ಸಂಖ್ಯೆ 215ಕ್ಕೆ ತಲುಪಿದೆ. ಇಬ್ಬರು ಸೋಂಕಿತರು ಇದುವರೆಗೆ ಮೃತಪಟ್ಟಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ 7733 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 163 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ.
ಇಂದು ಹೊಸದಾಗಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ. ಮಂಗಳವಾರ 116 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರೆಗೆ ಕಳುಹಿಸಿದ ಸ್ಯಾಂಪಲ್ ನಲ್ಲಿ 106 ಮಂದಿಯಲ್ಲಿ ಸೋಂಕು ದೃಢಪಟ್ಟರೆ, 476 ಮಂದಿಯ ತಪಾಸಣಾ ವರದಿ ನೆಗೆಟಿವ್ ಆಗಿದ್ದು, 467 ಮಂದಿಯ ಪರೀಕ್ಷಾ ವರದಿ ಲಭಿಸಬೇಕಿದೆ.