ಮಂಗಳೂರು, ಏ 01 (Daijiworld News/MSP): ದೇಶದ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ಬಗ್ಗೆ ಫೇಸ್ ಬುಕ್ ನಲ್ಲಿ ಸಾರ್ವಜನಿಕ ತಪ್ಪು ಮಾಹಿತಿ ನೀಡಿ ಸುಳ್ಳು ವದಂತಿ ಹರಡಿದ ಆರೋಪದ ಮೇಲೆ ಮಂಗಳೂರು ತಾಲೂಕು ಉಳಾಯಿಬೆಟ್ಟು ನಿವಾಸಿ ನಿಝಾಮ್ ನಿಝಾ(35) ನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಅವರು ನೀಡಿದ ದೂರಿನ ಅನ್ವಯ ಈ ಕ್ರಮ ಜರಗಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಾಂಡೇಶ್ವರ ಪೊಲೀಸರು ತಿಳಿಸಿದ್ದಾರೆ. ಕೊರೊನಾ ಕಾಯಿಲೆ ಬಗ್ಗೆ ಕೇಂದ್ರ ಗೃಹ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅರ್ಥ ಬರುವ ರೀತಿಯಲ್ಲಿ ಬರೆದು ತನ್ನ ಫೇಸ್ ಬುಕ್ ಖಾತೆಯಲ್ಲಿ ಆರೋಪಿ ನಿಝಾಮ್ ನಿಝಾ ಮಾ.೨೬ ರಂದು ಪೋಸ್ಟ್ ಮಾಡಿದ್ದ ಹಾಗೆಯೇ ಮಾ.೨೩ರಂದು ಪ್ರಧಾನಿ ವಿರುದ್ದ ಅವಹೇಳಕಾರಿಯಾಗಿ ತನ್ನ ಫೇಸ್ ಬುಕ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದ ಎಂದು ಜಗದೀಶ್ ಶೇಣವ ಆರೋಪಿಸಿ , ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಶ್ ಠಾಣೆಗೆ ದೂರು ಸಲ್ಲಿಸಿದ್ದರು.