ಮಂಗಳೂರು, ಏ 02 (DaijiworldNews/SM): ಕಾಸರಗೋಡಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ದ.ಕ. ಜಿಲ್ಲೆಯ ಅದರಲ್ಲೂ ಮಂಗಳೂರಿನ ಯಾವುದೇ ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲಿಸಲು ಅವಕಾಶವಿಲ್ಲ ಎಂದು ಆರೋಗ್ಯಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ದ.ಕ. ಜಿಲ್ಲೆಯಲ್ಲಿ ಈಗಾಗಲೇ ೯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ದ.ಕ. ಜಿಲ್ಲೆಯೊಳಗೆ ಹೊರರಾಜ್ಯಗಳಿಂದ ರೋಗಿಗಳನ್ನು ಕರೆ ತರದಂತೆ ಆದೇಶ ನೀಡಲಾಗಿದೆ.
ಕೊರೊನಾ ಸೋಂಕು ನಿಯಂತ್ರಣಕ್ಕೆ ಈ ರೀತಿಯ ಕ್ರಮಗಳು ಅಗತ್ಯವಾಗಿದೆ. ನೆರೆ ಜಿಲ್ಲೆಯಲ್ಲಿ ವಿಪರೀತವಾಗಿರುವ ಸೋಂಕಿತರನ್ನು ಜಿಲ್ಲೆಯೊಳಗೆ ಆಗಮಿಸಲು ಅವಕಾಶ ನೀಡದೇ ಇದ್ದಲ್ಲಿ ಸೋಂಕು ಮತ್ತಷ್ಟು ಹರಡುವುದನ್ನು ತಪ್ಪಿಸಬಹುದಾಗಿದೆ. ಇದೇ ಕಾರಣದಿಂದಾಗಿ ಹೊರರಾಜ್ಯದ ರೋಗಿಗಳಿಗೆ ಅದರಲ್ಲೂ ಕಾಸರಗೋಡಿನ ರೋಗಿಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸುವುದಕ್ಕೆ ತಾತ್ಕಾಲಿಕ ರಿಲೀಫ್ ನೀಡಲಾಗಿದೆ.