ಮಂಗಳೂರು, ಎ.03 (Daijiworld News/MB) : ರಸ್ತೆಗೆ ಯಾವುದೇ ಖಾಸಗಿ ವಾಹನಗಳು ಇಳಿಯುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದ ಕಾರಣದಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರವು ಅತಿ ವಿರಳವಾಗಿದೆ. ಇನ್ನು ಹಲವು ಕಡೆಗಳಲ್ಲಿ ಕೆಲವು ವಾಹನಗಳು ರಸ್ತೆಗಿಳಿದಿದ್ದು ಪೊಲೀಸರು ಕೇಸ್ ದಾಖಲು ಮಾಡುತ್ತಿದ್ದಾರೆ.
ಹಾಗೆಯೇ ಬೆಳಿಗ್ಗೆ 7 ರಿಂದ 12 ಗಂಟೆಯವರೆಗೆ ಅಗತ್ಯ ವಸ್ತು ಪೂರೈಕೆಯ ಅಂಗಡಿಗಳು ತೆರೆದಿರಲಿದ್ದು ಅಂಗಡಿಗೆ ಗ್ರಾಹಕರ ಸಂಖ್ಯೆಯೂ ಕಡಿಮೆಯಾಗಿದೆ.
ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದರೂ ಹಲವು ಖಾಸಗಿ ವಾಹನಗಳು ಸಂಚಾರ ಮಾಡುತ್ತಿದ್ದು ಪೊಲೀಸರು ಕೇಸ್ ಹಾಕುತ್ತಿದ್ದಾರೆ.
ಕೊರೊನಾ ಲಾಕ್ಡೌನ್ ಆರಂಭವಾದ 2-3 ದಿನಗಳ ಕಾಲ ಜನರು ಲಾಕ್ಡೌನ್ ಜಾರಿಯಿದ್ದರೂ ರಸ್ತೆಯಲ್ಲಿ ತಿರುಗಾಡುತ್ತಿದ್ದು ಇದೀಗ ನಿರ್ಬಂಧವನ್ನು ಇನ್ನಷ್ಟು ಕಠಿಣ ಮಾಡಲಾಗಿದೆ. ಜಿಲ್ಲಾಡಳಿತ ಜನರ ಓಡಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗುರುವಾರದಿಂದ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದೆ.