ಮಂಗಳೂರು, ಏ 03 (DaijiworldNews/SM): ಕೊರೋನ ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತ ಎ.14ರವರೆಗೆ ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಿದ್ದು, ಇದು ಶನಿವಾರವೂ ಪೂರ್ಣ ಪ್ರಮಾಣದಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿರುವ ಅವರು ಶುಕ್ರವಾರದಿಂದ ಖಾಸಗಿ ವಾಹನಗಳ ಸಂಚಾರವನ್ನು ಜಿಲ್ಲಾದ್ಯಂತ ಸಂಪೂರ್ಣ ನಿಷೇಧಿಸಲಾಗಿದೆ ಎಂಬುವುದಾಗಿ ಸ್ಪಷ್ಟಪಡಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಪಡಿತರ ವಿತರಣೆ ಬಗ್ಗೆ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿರುವ ಅವರು, ಜನರು ಗೊಂದಲಕ್ಕೀಡಾಗಬಾರದು ಎಂದಿದ್ದಾರೆ. 2 ಲಕ್ಷ 71 ಸಾವಿರ ಬಿಪಿಎಲ್ ಕುಟುಂಬಗಳಿಗೆ ಗುರುವಾರದಿಂದ ಪಡಿತರ ವಿತರಣೆ ಕಾರ್ಯವನ್ನು ಆರಂಭಿಸಲಾಗಿದೆ. ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಖರೀಧಿ ನಡೆಸಬೇಕಿದೆ ಎಂದರು.