ಬಂಟ್ವಾಳ, ಏ 4 (Daijiworld News/MSP): ಬಿ.ಸಿ.ರೋಡಿನ ಕೈಕಂಬ ಬಳಿಯ ಪರ್ಲದಲ್ಲಿ ಮೂರು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಸ್ಥಳೀಯ ನಿವಾಸಿ ಅಬ್ಬಾಸ್ ಅಲಿ ಅವರ ಪತ್ನಿ ರಮೀಝಾ ಬಾನು(29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರಗೆ ಕಾರಣ ತಿಳಿದು ಬಂದಿಲ್ಲ.
ಆಟೋ ಚಾಲಕನಾಗಿರುವ ಪತಿಯನ್ನು ಲಾಕ್ ಡೌನ್ ಸಮಯದಲ್ಲಿ ಹೊರಹೋಗದಂತೆ ಕೇಳಿಕೊಂಡರೂ ಪತಿ ಹೊರಹೋಗಿದ್ದು ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.
ಸದ್ಯ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.