ಮಂಗಳೂರು,ಏ 04 (Daijiworld News/MSP): ಕಳೆದೆರಡು ದಿನಗಳಿಂದ ಪಾಸಿಟಿವ್ ಪ್ರಕರಣಗಳಿಲ್ಲದೆ ನಿರಾಳವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಶನಿವಾರ ಬೆಚ್ಚಿಬಿದ್ದಿದೆ. ಶನಿವಾರ ಒಂದೇ ದಿನ ಕೋವಿಡ್ 19 ಸೊಂಕಿತ ಮೂರು ಹೊಸದಾಗಿ ಪ್ರಕರಣಗಳು ಪತ್ತೆಯಾಗಿದ್ದು , ಹೀಗಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12 ಏರಿದೆ.
ದೆಹಲಿಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಇನ್ನು ನಿಜಾಮುದ್ದೀನ್ನಲ್ಲಿ ನಡೆದ ತಬ್ಲಿಫ್-ಎ-ಜಮಾತ್ ಧಾರ್ಮಿಕ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸದ್ಯದ ಪ್ರಕಾರ 29 ಭಾಗವಹಿಸಿದ ಬಗ್ಗೆ ಮಾಹಿತಿ ಇದ್ದು 9 ಜನರ ವರದಿ ಬಂದಿದ್ದು 2 ಪಾಸಿಟಿವ್ ಆಗಿದೆ. ಉಳಿದ 20 ಜನರ ವರದಿಗಾಗಿ ಜಿಲ್ಲಾಡಳಿತ ನೀರಿಕ್ಷೆಯಲ್ಲಿದೆ.
ದೆಹಲಿಗೆ ತೆರಳಿದ್ದ ಓರ್ವ ಯುವಕ ತುಂಬೆಯ ಮದಕ ಬೊಳ್ಳಾಡಿ ಪ್ರದೇಶದ ನಿವಾಸಿಯಾಗಿದ್ದು , ಈ ಗ್ರಾಮದಲ್ಲಿ 500ಕ್ಕೂ ಮನೆಗಳಿವೆ. ತಹಶೀಲ್ದಾರ್ ಮತ್ತು ಎಸ್ ಐ ಸ್ಥಳಕ್ಕೆ ಆಗಮಿಸಿದ್ದು ತುಂಬೆ ಗ್ರಾಮವನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಯಾರು ಮನೆಯಿಂದ ಹೊರಬಾರದಂತೆ ಪೊಲೀಸರು ಧ್ವನಿವರ್ಧಕ ಮೂಲಕ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎನ್ನಲಾಗಿದೆ
ಇದಲ್ಲದೆ ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದು ಕ್ವಾರೇಂಟೇನ್ ನಲ್ಲಿದ್ದ ವ್ಯಕ್ತಿಗೂ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಕಿಂತರ ಸಂಖ್ಯೆ 12 ಏರಿಕೆಯಾಗಿದೆ.