ಮಂಗಳೂರು, ಏ 05 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು ಸ್ವಲ್ಪ ಮಟ್ಟಿಗೆ ಖುಷಿಯ ವಿಚಾರವಾಗಿದ್ದು, ರವಿವಾರದಂದು ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ.
ರವಿವಾರದಂದು ೨೮ ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ಎಲ್ಲಾ ವರದಿಗಳು ನೆಗೆಟಿವ್ ಆಗಿವೆ. ಆ ಮೂಲಕ ಶನಿವಾರದಂದು ಮೂರು ಪ್ರಕರಣಗಳು ದೃಢಪಟ್ಟು ಉಂಟಾಗಿದ್ದ ಆತಂಕ ಸ್ವಲ್ಪಮಟ್ಟಿಗೆ ದೂರವಾಗಿದೆ. ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಡಳಿತ ಎಲ್ಲಾ ರೀತಿಯ ಮುತುವರ್ಜಿ ವಹಿಸಿದ್ದು, ಆರೋಗ್ಯ ಇಲಾಖೆ ಕೂಡ ಹಲವು ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದ್ದು, ಪೊಲೀಸ್ ಇಲಾಖೆ ಕೂಡ ಲಾಕ್ ಡೌನ್ ಮೂಲಕ ಜನತೆಯನ್ನು ನಿಯಂತ್ರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.