ಪುತ್ತೂರು, ಏ 06 (DaijiworldNews/MSP): ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಏಪ್ರಿಲ್ 5 ರ ಭಾನುವಾರ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಇಡೀ ರಾಷ್ಟ್ರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಆದರೆ ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಭವಿಸಿದ ವಿಲಕ್ಷಣ ಘಟನೆಯೊಂದರಲ್ಲಿ ದುಷ್ಕರ್ಮಿಯೊಬ್ಬರು ಗುಡ್ಡಕ್ಕೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ರಾತ್ರಿ ಸುಮಾರು ೯ ಗಂಟೆಯ ವೇಳೆಗೆ ಬಂದ ದುಷ್ಕರ್ಮಿ ಬೈಕ್ನಲ್ಲಿ ಬಂದು ಬೆಂಕಿಯನ್ನು ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.ಈ ಬಗ್ಗೆ, ಸ್ಥಳೀಯರೋರ್ವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಕಿ ಹಚ್ಚಿರುವ ತಪ್ಪಿತಸ್ಥನನ್ನು ಶೀಘ್ರವಾಗಿ ಬಂಧಿಸುವಂತೆ ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.