ಮಂಗಳೂರು, ಏ 06 (DaijiworldNews/SM): ರಾಜ್ಯದ ಆರು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ದ.ಕ. ಜಿಲ್ಲೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ರೆಡ್ ಝೋನ್ ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆ ನಡೆಸಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 14 ರ ತನಕ ಲಾಕ್ ಡೌನ್ ಮುಂದುವರೆಯಲಿದೆ. ಬಳಿಕ ಜನ ಜೀವನ ಸಹಜ ಸ್ಥಿತಿಗೆ ಮರಳಲಿದೆ. ಆದರೆ, ರಾಜ್ಯದ ಆರು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಯಲ್ಲಿ ಲಾಖ್ ಡೌನ್ ಆದೇಶ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರಲ್ಲಿ ದ.ಕ. ಜಿಲ್ಲೆಯೂ ಕೂಡ ಸೇರಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಬ್ಯವಾಗಿದೆ.
ಏಪ್ರಿಲ್ 14 ರ ನಂತರ ಬೆಂಗಳೂರಿನ ಕೆಲ ಪ್ರದೇಶಗಳು, ಮಂಗಳೂರು, ಮೈಸೂರು, ನಂಜನಗೂಡು, ಗೌರಿಬಿದನೂರು, ಬೀದರ್ನ್ನು ರೆಡ್ ಝೋನ್ ಎಂದು ಗುರುತಿಸಿ ಲಾಕ್ ಡೌನ್ ಮುಂದುವರಿಸಲಾಗುವುದೆಂದು ತಿಳಿದು ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಜೊತೆಗೆ ಸಭೆ ನಡೆಸಿ ರೆಡ್ ಝೋನ್ಗಳಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.