ಮಂಗಳೂರು,ಮಾ 01: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ರಾಜ್ಯಾದ್ಯಂತ 1004 ಕೆಂದ್ರದಲ್ಲಿ ನಡೆಯುವ ಪರೀಕ್ಷೆಯಲ್ಲಿ 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10.15 ರಿಂದ ಆರಂಭಗೊಂಡು ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ. ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಮತ್ತು ಪ್ರಶ್ನೆ ಪತ್ರಿಕೆ ಸರಬರಾಜು ಮಾಡುವ ವಾಹನಕ್ಕೆ ಜಿಪಿಎಸ್ ಅಳವಡಿಸಲಾಗಿದೆ. ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ನಡೆಸಲು ಎಲ್ಲಾ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ 38 ಸಾವಿರದ 633 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 16 ಸಾವಿರದ 74 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು ಪರೀಕ್ಷೆ ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಂಡಿದ್ದು ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇಂದಿನಿಂದ ಆರಂಭಗೊಂಡು ಏಪ್ರಿಲ್ 17ರವರೆಗೆ ನಡೆಯಲಿದೆ.