ಉಡುಪಿ, ಏ 07 (DaijiworldNews/SM): ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಜನತೆಯ ನಿದ್ದೆಗೆಡಿಸಿದೆ. ಇದರಿಂದಾಗಿ ದೇಶವೇ ಲಾಕ್ ಡೌನ್ ಆಗಿದೆ. ಇದರಿಂದಾಗಿ ಕೆಲಸವಿಲ್ಲದೆ ಸಾಕಷ್ಟು ಮಂದಿ ಮನೆಯಲ್ಲೇ ಇರುವಂತಾಗಿದೆ. ಈ ನಡುವೆ ಕೆಲವರು ತಪ್ಪು ಸಂದೇಶಗಳನ್ನು, ಸುಳ್ಳು ಸಿದ್ದುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಉಡುಪಿ ಎಸ್ಪಿ ವಿಷ್ಣುವರ್ಧನ್ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದರು.
ಸುಳ್ಳು ಸುದ್ದಿ ಹಬ್ಬಿಸುವವರನ್ನು ಪತ್ತೆ ಹಚ್ಚಿ ಕ್ರಮ ತೆಗೆದು ಕೊಳ್ಳುತ್ತೇವೆ. ಈಗಾಗಲೇ ಜಿಲ್ಲೆಯಲ್ಲಿ ಈ ಬಗ್ಗೆ ಕಾರ್ಯ ಪ್ರಗತಿಯಲ್ಲಿದೆ. ಅಂತಹ ಘಟನೆ ಕಂಡು ಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲು ಮಾಡಿ ಕ್ರಮ ತೆಗದು ಕೊಳ್ಳುತ್ತೇವೆ ಎಂದು ಎಸ್ಪಿ ಹೇಳಿದರು.