ಮಂಗಳೂರು, ಮಾ 2: ಸಿಎಂ ಸೇರಿದಂತೆ ನಮ್ಮ ವಿರುದ್ಧ ಪ್ರಕರಣ ದಾಖಲಿಸಲು ಮನವಿ ಮಾಡಿರುವುದು ಬಹಳ ತಡವಾಯಿತು ಎಂದು ಸಚಿವ ಯು ಟಿ ಖಾದರ್ ವ್ಯಂಗ್ಯ ಮಾಡಿದ್ದಾರೆ.
ಸರ್ಕಾರಿ ಕಾರ್ಯಕ್ರಮದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ, ಸಚಿವ ಯು ಟಿ ಖಾದರ್, ಡಿಕೆಶಿ, ರಮಾನಾಥ ರೈ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರಕಾರಿ ಕಾರ್ಯಕ್ರಮದಲ್ಲಿ ಸರಕಾರಿ ಯೋಜನೆ ಬಗ್ಗೆ ಮಾತನಾಡಿದ್ದೇವೆ. ನಮ್ಮ ಯೋಜನೆ ಮತ್ತು ಹಿಂದಿನ ಯೋಜನೆ ಬಗ್ಗೆ ತಿಳಿ ಹೇಳಿದ್ದೇವೆ. ನಾವು ವೇದಿಕೆಯನ್ನು ದುರ್ಬಳಕೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.