ಮಂಗಳೂರು, ಏ 10 (DaijiworldNews/SM): ದೇಶದೆಲ್ಲೆಡೆ ಲಾಕ್ ಡೌನ್ ಆಗಿರುವ ಹಿನ್ನೆಲೆ ಜನರು ಮನೆಯಲ್ಲೇ ಇರುವಂತೆ ಸರಕಾರ ಆದೇಶ ನೀಡಿದೆ. ಆದರೆ, ಆದೇಶ ಉಲ್ಲಂಘಿಸುವವರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಇದೀಗ ದ.ಕ. ಜಿಲ್ಲೆಯಲ್ಲಿ ಆದೇಶ ಉಲ್ಲಂಘಿಸಿದ ಸುಮಾರು 178 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದ.ಕ. ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ ಮಂಗಳೂರು ನಗರದಲ್ಲಿ ಅನವಶ್ಯಕ ತಿರುಗಾಡುತ್ತಿದ್ದವರನ್ನು ತಪಾಸಣೆಗೆ ಒಳಪಡಿಸಿದ ಸಂದರ್ಭ ಈ ವಿಚಾರಗಳು ಬೆಳಕಿಗೆ ಬಂದಿದ್ದು, ಪೊಲೀಸರು ವಾಹನಗಳನ್ನು ಸೀಝ್ ಮಾಡಿದ್ದಾರೆ.
ಇನ್ನು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ಆದರೂ ಆದೇಶವನ್ನು ಉಲ್ಲಂಘಿಸಿ ವಾಹನಗಳು ನಿರಂತರವಾಗಿ ಸಂಚಾರ ನಡೆಸುತ್ತಿವೆ.
ಮಾ.10ರ ಶುಕ್ರವಾರದಂದು 178ವಾಹನಗಳು ಪೊಲೀಸ್ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬುವುದಾಗಿ ಮಂಗಳೂರು ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ಮಾಹಿತಿ ನೀಡಿದ್ದಾರೆ.