ಮಂಗಳೂರು, ಮಾ 2: ನಗರದ ಪಚ್ಚನಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಪಚ್ಚನಾಡಿ ಸಮೀಪದ ಮನೆಯಲ್ಲಿ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರೊಬ್ಬರು ಕಮೀಷನರ್ ಕಛೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ನೀಡಿದ್ದಾರೆ. ತನ್ನ ಮನೆಯಲ್ಲಿ ಮಹಿಳೆ ಅನೇಕ ಯುವಕರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾಳೆ. ಇದರಿಂದ ಇಲ್ಲಿನ ಪರಿಸರವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಕುರಿತು ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಪ್ರತಿಕ್ರಿಯಿಸಿದ್ದು, ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.