ಮಂಗಳೂರು, ಎ.12 (Daijiworld News/MB) : ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಎಪ್ರಿಲ್ 12ನೇ ತಾರೀಖಿನಿಂದ ಜಾರಿಗೆ ಬರುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಬಂದರು ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳಿದ್ದು, ಅವುಗಳೆಲ್ಲ ಮೀನುಗಾರಿಕೆಗೆ ತೊಡಗಿಸಿಕೊಳ್ಳಲಿದೆ.
ಕೊರೊನಾ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡಬೇಕೆಂದು ವಿನಂತಿ ಎಂದು ಬಂದರು ಮತ್ತು ಮೀನುಗಾರಿಕೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.