ಮಂಗಳೂರು, ಎ.12 (Daijiworld News/MB) : ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಉಲ್ಲಂಘನೆ ಮಾಡಿ ಸಂಚಾರ ಮಾಡುತ್ತಿದ್ದ 167 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದು ಕೇಸು ದಾಖಲಿಸಿದ್ದಾರೆ.
ದ.ಕ. ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ ಮಂಗಳೂರು ನಗರದಲ್ಲಿ ಅನವಶ್ಯಕ ತಿರುಗಾಡುತ್ತಿದ್ದವರನ್ನು ತಪಾಸಣೆಗೆ ಒಳಪಡಿಸುತ್ತಿದ್ದು ಲಾಕ್ಡೌನ್ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ, ಕಾರಉ, ಆಟೊ, ರಿಕ್ಷಾ ಸೇರಿದಂತೆ ಹಲವು ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.
ಶುಕ್ರವಾರದಂದು ಒಂದೇ ದಿನ 178 ವಾಹನಗಳು ಪೊಲೀಸ್ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದರು.