ಕಾಸರಗೋಡು, ಏ 13 (DaijiworldNews/SM): ಕೋವಿಡ್ 19 ನಿಂದ ತತ್ತರಿಸುತ್ತಿದ್ದ ಕಾಸರಗೋಡು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕಾಸರಗೋಡಿನಲ್ಲಿ ಎರಡು ದಿನಗಳಿಂದ ಹೊಸ ಪ್ರಕರಣಗಳು ದೃಢಪಟ್ಟಿಲ್ಲ. ಅದರೊಂದಿಗೆ ಸೋಂಕು ಮುಕ್ತರಾಗುವವರ ಸಂಖ್ಯೆ ಹೆಚ್ಚುತ್ತಿದೆ.
ಆದಿತ್ಯವಾರ ಮತ್ತು ಸೋಮವಾರ ಕಾಸರಗೋಡಿನಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿಲ್ಲ. ಆದರೆ ಎರಡು ದಿನಗಳಲ್ಲಿ 38 ಮಂದಿ ಸೋಂಕು ಮುಕ್ತರಾಗಿದ್ದಾರೆ. ಕಾಸರಗೋಡಿನಲ್ಲಿ 166 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದುವರೆಗೆ 73 ಮಂದಿ ಗುಣಮುಖರಾಗಿದ್ದಾರೆ. 93 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸೋಲೇಷನ್ ವಾರ್ಡ್ ನಲ್ಲಿರುವ ರೋಗಿಗಳ ಸಂಖ್ಯೆ ಇಳಿಕೆ ಯಾಗುತ್ತಿದೆ.
ಸೋಮವಾರ ಜಿಲ್ಲಾ ಸರಕಾರಿ ಆಸ್ಪತ್ರೆಯಿಂದ ಹತ್ತು, ಜನರಲ್ ಸರಕಾರಿ ಆಸ್ಪತ್ರೆಯಿಂದ ಇಬ್ಬರು ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10056 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 9840 ಮಂದಿ ಆಸ್ಪತ್ರೆಗಳಲ್ಲೂ, 216 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ. ಸೋಮವಾರ 106 ಮಂದಿಯ ಸ್ಯಾಂಪಲ್ ಗಳನ್ನು ತಪಾಸಣೆಗೆ ಕಳುಹಿಸಲಾಗಿದೆ. ಈ ವರೆಗೆ 2533 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದರಲ್ಲಿ 1659 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. 540 ಮಂದಿಯ ಫಲಿತಾಂಶ ಲಭಿಸಬೇಕಿದೆ.