ಕಡಬ, ಏ 13 (DaijiworldNews/SM): ಅಪರಿಚಿತ ವ್ಯಕ್ತಿಗೆ ಒಟಿಪಿ ಸಂಖ್ಯೆಯನ್ನು ನೀಡುವ ಮೂಲಕ ಬ್ಯಾಂಕ್ ಖಾತೆಯಿಂದ ಹಣ ಎಗರಿಸುತ್ತಿರುವ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಇದೀಗ ಕಡಬದ ವ್ಯಕ್ತಿಯೋರ್ವರು ಅಪರಿಚಿತರಿಗೆ ಒಟಿಪಿ ಸಂಖ್ಯೆ ನೀಡಿ ವಂಚನೆಗೆ ಒಳಗಾಗಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬರು ಕಡಬ ಮೂಲದ ನಿವಾಸಿ ಧರಣೇಂದ್ರ ಜೈನ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ. ಕಡಬ ನಿವಾಸಿ ಧರಣೇಂದ್ರ ಜೈನ್ ಎಂಬವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಮೊಬೈಲ್ ಸಂಖ್ಯೆಗೆ ಎಪ್ರಿಲ್ 10ರಂದು ಸಂಜೆ 5.30ಕ್ಕೆ ಅಪರಿಚಿತ ವ್ಯಕ್ತಿಯು ಕರೆಮಾಡಿ ತಾನು ಏರ್ಟೆಲ್ ಕಸ್ಟಮರ್ ಕೇರ್ ನಿಂದ ಕರೆಮಾಡುವುದಾಗಿ ಪರಿಚಯಿಸಿಕೊಂಡಿದ್ದಾನೆ.
ನಿಮ್ಮ ಸಿಮ್ ಆ್ಯಕ್ಟಿವೇಟ್ ಮಾಡಬೇಕಾಗಿದ್ದು, ಅದಕ್ಕಾಗಿ ಒಟಿಪಿ ನಂಬರ್ ಕಳುಹಿಸಿ ಕೊಡುತ್ತೇವೆ ಎಂದು ತಿಳಿಸಿದಾಗ ಧರಣೇಂದ್ರ ಜೈನ್ ರ ಪುತ್ರ ಒಟಿಪಿ ಸಂಖ್ಯೆಯನ್ನು ಅಪರಿಚಿತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ 50 ಸಾವಿರ ರೂಪಾಯಿ, 24900 ಹಾಗೂ 25000 ಹಣವನ್ನು ಬ್ಯಾಂಕ್ ಖಾತೆಯಿಂದ ಡ್ರಾ ಮಾಡಲಾಗಿದೆ. ಈ ಮೂಲಕ ಒಟ್ಟು 99900 ರೂ. ಗಳನ್ನು ಕಳೆದುಕೊಂಡು ತಾನು ಮೋಸ ಹೋಗಿರುವುದು ತಿಳಿದುಬಂದಿದೆ.
ಈ ಬಗ್ಗೆ ಕಡಬ ಠಾಣೆಗೆ ದೂರು ದಾಖಲಾಗಿದೆ.