ಬಂಟ್ವಾಳ, ಎ.15 (DaijiworldNews/PY) : ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅಶ್ರಫ್ ಎಂಬವರು ಎ.11 ಲಾರಿ ಮೂಲಕ ಮಂಗಳೂರಿಗೆ ಬಂದಿದ್ದು, ಸರ್ಕಾರದ ಆದೇಶ ಉಲ್ಲಂಘಿಸಿದ ಕಾರಣ ಈತನ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊಹಮ್ಮದ್ ಅಶ್ರಫ್ ಎಂಬಾತ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಲಾಕ್ಡೌನ್ ಘೋಷಣೆಯಾದ ನಂತರ ಎ.11ರಂದು ಲಾರಿ ಮೂಲಕ ಮಂಗಳೂರಿಗೆ ಬಂದು ಆತನ ಸಂಬಂಧಿಕರ ಮನೆಯಾದ ಬಂಟ್ವಾಳದ ಸಜಿಪಮೂಡ ಗ್ರಾಮದ ಬೊಳ್ಳಾಯಿ ಎಂಬಲ್ಲಿ ತಂಗಿದ್ದಾರೆ. ಈ ವಿಚಾರವಾಗಿ ಎ.15ರಂದು ಸ್ಥಳೀಯರು ದೂರು ನೀಡಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರು ಪತ್ತೆಹಚ್ಚಿ ಆತನನ್ನು ಹಾಸ್ಪಿಟಲ್ ಕ್ವಾರಂಟೈನ್ಗೆ ದಾಖಲಿಸಿದ್ದಾರೆ.
ಸರಕಾರದ ಆದೇಶವನ್ನು ಉಲ್ಲಂಘಿಸಿ ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಯಾವುದೇ ವೈದ್ಯಕೀಯ ಪರೀಕ್ಷೆಗೆ ಒಳಪಡದೆ ನಿರ್ಲಕ್ಷ್ಯ ವಹಿಸಿ ಅಂತರಾಜ್ಯ ಪ್ರಯಾಣಿಸಿದ್ದ ಕಾರಣ ಮೊಹಮ್ಮದ್ ಅಶ್ರಫ್ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.