ಮಂಗಳೂರು, ಏ 16(DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದು, ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ 15 ಮಂದಿ ಬಿಡುಗಡೆಗೊಂಡಿದ್ದಾರೆ. ಇನ್ನು ಬುಧವಾರ 113 ವರದಿಗಳು ಲಭ್ಯವಾಗಿದ್ದು ಎಲ್ಲವೂ ನೆಗೆಟಿವ್ ಆಗಿವೆ.
ದ.ಕ. ಜಿಲ್ಲೆಯಲ್ಲಿ ಕಳೆದ 13 ದಿನಗಳಿಂದ ನಿರಂತರ ನೆಗೆಟಿವ್ ವರದಿಗಳು ಲಭ್ಯವಾಗುತ್ತಿವೆ. ಈ ನಡುವೆ 12 ಪ್ರಕರಣಗಳ ಪೈಕಿ ಒಂಬತ್ತು ಮಂದಿ ಬಿಡುಗಡೆಗೊಂಡಿದ್ದಾರೆ. ಇನ್ನು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ಇನ್ನು ಇಲ್ಲಿಯ ತನಕ 682 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, ಈ ಪೈಕಿ 623 ಮಂದಿಯ ವರದಿ ಲಭ್ಯವಾಗಿದೆ. ಈ ಪೈಕಿ 611 ಮಂದಿಯ ವರದಿ ನೆಗೆಟಿವ್ ಬಂದಿರುವುದು ಖುಷಿಯ ವಿಚಾರವಾಗಿದೆ. ಇನ್ನು ಬುಧವಾರದಂದು 24 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.