ಮಂಗಳೂರು, ಎ.17 (DaijiworldNews/PY) : ಜಿಲ್ಲೆಯಲ್ಲಿ ಜಿಲ್ಲಾಡಳಿತ ವೈದ್ಯಕೀಯ ತಂಡ ಕೊರೊನಾ ವಿರುದ್ದ ಸಮರಕ್ಕೆ ಸನ್ನದ್ದವಾಗಿದೆ ಎಂದು ಉಸ್ತುವಾರಿ ಸಚಿವರಿಂದ ನಡೆದ ಕೊರೊನಾ ನಿಯಂತ್ರಣದ ಕುರಿತು ನಡೆದ ಸಭೆಯಲ್ಲಿ ಹೇಳಿದರು.
ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದರು, ಶಾಸಕರು ಅಧಿಕಾರಿಗಳ ಸಭೆಯಲ್ಲಿ, ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಕೊರೊನಾ ಸೋಂಕಿತರ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದು, ಜಿಲ್ಲೆಯಲ್ಲಿ ಜಿಲ್ಲಾಡಳಿತ ವೈದ್ಯಕೀಯ ತಂಡವು ಕೊರೊನಾ ವಿರುದ್ದ ಸಮರಕ್ಕೆ ಸನ್ನದ್ದವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು ಹನ್ನೆರಡು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈವರೆಗೆ 9 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನೂ ಮೂರು ಸೋಂಕಿತರ ಗಂಟಲ ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಈಗಾಗಲೇ ಒಂದು ವಾರದಲ್ಲಿ ನೆಗೆಟಿವ್ ಲಭಿಸಿದ್ದು, ನಾಳೆ ಎರಡನೇ ಪರೀಕ್ಷಾ ವರದಿ ಬಂದ ಬಳಿಕ ಮೂವರನ್ನು ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದರು.
ಇನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಕೊರೊನಾ ಆಸ್ಪತ್ರೆಯಾದ ವಿಚಾರ, ಜಿಲ್ಲಾ ಆಸ್ಪತ್ರೆಯ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಬಗ್ಗೆ, ಸರ್ಕಾರಿ ಆಸ್ಪತ್ರೆ ಯಿಂದ ಖಾಸಗಿ ಆಸ್ಪತ್ರೆಗೆ ಸೇರಿಸಲಾದ ರೋಗಿಗಳೆ ಬಿಲ್ ಹಾಕಿದ ಬಗ್ಗೆ, ಸರಕಾರಿ ದರದಲ್ಲಿ ಯಾವುದೇ ಚಿಕಿತ್ಸೆ ನೀಡದಿರುವ ಬಗ್ಗೆ ಹಾಗೂ ಬಡ ಜನರಿಗೆ ಸಮರ್ಪಕ ಚಿಕಿತ್ಸೆ ದೊರಕದೇ ಇದ್ದ ಹಿನ್ನೆಲೆ ಶಾಸಕರು ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಇಲಾಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.