ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧಪಟ್ಟಂತೆ , ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ತನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ನನ್ನ ವಿರುದ್ಧದ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಮತ್ತು ರಾಜಕೀಯ ಪ್ರೇರಿತ ಎಂದು ಮುಂಬೈಯಿಂದ ದೆಹಲಿ ವಾಪಸ್ ಆದ ಬಳಿಕ ಕಾರ್ತಿ ಚಿದಂಬರಂ ಹೇಳಿದ್ದಾರೆ.
ಕಾರ್ತಿ ಚಿದಂಬರಂ ಐಎನ್ಎಕ್ಸ್ ಮೀಡಿಯಾದಿಂದ ಎಫ್ಐಪಿ ಬಿ ಕ್ಲಿಯರೆನ್ಸ್ ಗಾಗಿ 3.5 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಇಂದ್ರಾಣಿ ಮುಖರ್ಜಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಒಟ್ಟಿಗೆ ವಿಚಾರಣೆಗೊಳಪಡಿಸಲಾಗಿತ್ತು. ವಿಚಾರಣೆ ಮುಗಿಸಿ ಮುಂಬೈಯಿಂದ ದೆಹಲಿ ವಾಪಸ್ ಆದ ಕಾರ್ತಿ ಈ ಹೇಳಿಕೆ ನೀಡಿದ್ದಾರೆ