ಬಂಟ್ವಾಳ, ಎ.18 (DaijiworldNews/PY) : ಬಂಟ್ವಾಳ ತಾಲೂಕಿನ ಅಂಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಮನೆಯ ಹಿಂದೆ ಕಳ್ಳಭಟ್ಟಿ ಅಡ್ಡಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಕಳ್ಳಭಟ್ಟಿ ತಯಾರಿಸುವ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳನ್ನು ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ಎಂದು ಗುರುತಿಸಲಾಗಿದೆ.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶೈಲಜಾ ಕೋಟೆ ಅವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ಅವರ ನೇತ್ರತ್ವದಲ್ಲಿ, ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕರು ಗೀತಾ ಅವರ ,ಮಾಗದರ್ಶನದಂತೆ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರು ವಿಜಯ್ ಕುಮಾರ್, ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.
ದಾಳಿ ನಡೆಸಿದ ಸಂದರ್ಭ, ಕ್ರಿಸ್ಟನ್ ಡಿಸೋಜರವರ ಮನೆಯ ಹಿಂಭಾಗದಲ್ಲಿ 1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೇಜಿ ಬೆಲ್ಲ ಮತ್ತು 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಪ್ತಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.