ಬಂಟ್ವಾಳ, ಏ 19(DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಂಟ್ವಾಳ ಮೂಲದ ಮಹಿಳೆಯೊಬ್ಬರು ಮೃತಪಟ್ಟ ಬೆನ್ನಲ್ಲೇ ಬಂಟ್ವಾಳ ನಗರದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ 20 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಮಹಿಳೆಯ ಮನೆಯ ಸುತ್ತ ಮುತ್ತಲ ಮನೆಯ ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಮಂಗಳೂರಿಗೆ ಅವರನ್ನು ಕರೆ ತಂದ ಆರೋಗ್ಯ ಇಲಾಖೆ ಅವರನ್ನು ನಿಗಾದಲ್ಲಿರಿಸಿದೆ. ಇನ್ನುಳಿದಂತೆ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ 10 ಮಂದಿಯ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.
ಇನ್ನು ಕ್ವಾರಂಟೈನ್ ಗೆ ಒಳಪಡಿಸಿರುವವರ ಗಂಟಲ ದ್ರವದ ಮಾದರಿ ಸಂಗ್ರಹಿಸಲಾಗಿದ್ದು, ಅವುಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಸೋಮವಾರದಂದು ಪರೀಕ್ಷಾ ವರದಿ ಲಭುಅವಾಗುವ ನಿರೀಕ್ಷೆ ಇದೆ.