ಮಂಗಳೂರು, ಏ 20 (Daijiworld News/MSP): ಬೆಂಗಳೂರಿನ ಪಾದರಾಯನಪುರದಲ್ಲಿ ಕಾನೂನು ಉಲ್ಲಂಘನೆಯಾಗಿದ್ದು ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ, ಕಿಡಿಗೇಡಿಗಳ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವೈರಸ್ಗೆ ಯಾವುದೇ ಜಾತಿ, ಮತ ಸಮುದಾಯ ಇಲ್ಲ, ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ಯುದ್ದದ ರೀತಿಯಲ್ಲಿ ಹೋರಾಟ ನಡೆಸಲಾಗುತ್ತಿದೆ. ಯಾರೇ ಆಗಲಿ ಕಾನೂನಿಗೆ ತಲೆಬಾಗಬೇಕು. ಪಾದರಾಯನಪುರದಲ್ಲಿ ಆರೋಪಿಗಳ ವಿರುದ್ಧ ಉತ್ತರ ಪ್ರದೇಶದ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು. ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಬೇಕು ಎಂದು ಕಟೀಲ್ ಒತ್ತಾಯಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗೃಹಸಚಿವರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಪಾದರಾಯನಪುರದಲ್ಲಿ ನಡೆದ ಘಟನೆ ರಾಜ್ಯದಲ್ಲಿ ಮರುಕಳಿಸಬಾರದು . ಕೃತ್ಯ ಎಸಗಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಖಂಡನೀಯ. ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ