ಬಂಟ್ವಾಳ, ಏ 20 (DaijiworldNews/SM): ದ.ಕ. ಜಿಲ್ಲೆಯಲ್ಲೇ ಕೊರೊನಾ ಮಹಾಮಾರಿಗೆ ಬಂಟ್ವಾಳದ ಮಹಿಳೆ ಮೊದಲ ಬಲಿಯಾಗಿದ್ದು, ಅವರ ಸಾವಿನ ಬಳಿಕ ಹಲವು ಚರ್ಚೆಗಳು ನಡೆಯುತ್ತಿವೆ. ಇದೀಗ ವಾರದ ಹಿಂದೆ ಮಹಿಳೆಯನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡಿರುವ ಖಾಸಗಿ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಂಟ್ವಾಳದಲ್ಲಿ ಆದಿತ್ಯವಾರ ಕೊರೊನಾ ಪಾಸಿಟಿವ್ ನಿಂದ ಮೃತಪಟ್ಟ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರೊನಾ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಮತ್ತು ಸಂಬಂಧಿಸಿದ ಇಲಾಖೆಗೆ ಯಾವುದೇ ಮಾಹಿತಿ ನೀಡದೆ ಕೊರೊನಾ ಹರಡುವಿಕೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕು ವೈದ್ಯಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ಈ ನಡುವೆ ಈಗಾಗಲೇ ಮಹಿಳೆಯನ್ನು ಪರೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಖಾಸಗಿ ಕ್ಲೀನಿಕ್ ವೈದ್ಯರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಇನ್ನು ಈ ವೈದ್ಯರು ಮತ್ತೆ ಯಾರನ್ನೇಲ್ಲ ಸಂಪರ್ಕಿಸಿದ್ದಾರೆ. ಎಷ್ಟು ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.