ಬೆಂಗಳೂರು: ಲೋಕಾಯುಕ್ತ ನ್ಯಾ. ಪಿ .ವಿಶ್ವನಾಥ್ ಶೆಟ್ಟಿ ಅವರಿಗೆ ಲೋಕಾಯುಕ್ತ ಕಚೇರಿಯಲ್ಲಿಯೇ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಚಾರಣೆಗಾಗಿ ಲೋಕಾಯುಕ್ತ ಕಚೇರಿಗೆ ಬಂದಿದ್ದ ತುಮಕೂರು ಮೂಲದ ಆರೋಪಿ ತೇಜಸ್ ಶರ್ಮಾ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಚೂರಿ ಇರಿತದಿಂದ ಅವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೂರಿ ಇರಿದ ತೀವ್ರತೆಗೆ ಚಾಕು ಮುರಿದು ಹೋಗಿದ್ದು , ಆರೋಪಿ ತೇಜಸ್ ಶರ್ಮಾನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಕಳೆದ ವರ್ಷ ಲೋಕಾಯುಕ್ತ ಸ್ಥಾನಕ್ಕೆ ನೇಮಕಗೊಂಡಿದ್ದರು.