ವಿಟ್ಲ, ಏ 24 (DaijiworldNews/SM): ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರನ್ನು ವಿಶೇಷ ತಂಡ ಆಗಮಿಸಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಸುಮಾರು 33 ವರ್ಷದ ವ್ಯಕ್ತಿಯೊಬ್ಬರಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಅವರು ಬೆಂಗಳೂರಿನಿಂದ ತಿಂಗಳ ಹಿಂದೆ ಬಂದಿದ್ದಾರೆನ್ನಲಾಗಿದೆ. ಇದೇ ಕಾರಣದಿಂದಾಗಿ ಅವರಲ್ಲಿ ಜ್ವರ ಕಾಣಿಸಿಕೊಂಡಾಕ್ಷಣ ಮುನ್ನೆಚ್ಚರಿಕೆಯ ದೃಷ್ಠಿಯಿಂದ ಮಂಗಳೂರು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಈ ನಡುವೆ ಕರೋಪಾಡಿ ಭಾಗದಿಂದ ಉಸಿರಾಟದ ತೊಂದರೆಯ ಹಿನ್ನಲೆಯಲ್ಲಿ ಬುಧವಾರ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋದ 50 ವರ್ಷದ ಮಹಿಳೆಯ ಆರೋಗ್ಯದ ಚೇತರಿಕೆಯಾಗಿದ್ದು, ವೈದ್ಯಕೀಯ ತಪಾಸಣಾ ವರದಿ ಬಂದ ತಕ್ಷಣ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.