ಬೆಂಗಳೂರು, ಮಾ 08: ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಕು ಅನ್ನೋ ಕೂಗಿಗೆ ಕೊನೆಗೂ ಜಯ ಸಿಕ್ಕಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡ ನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದು, ನಾಡಧ್ವಜ ಸಮಿತಿ ನೀಡಿದ್ದ ನಾಡಧ್ವಜವನ್ನೆ ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಹಳದಿ, ಬಿಳಿ ಮಧ್ಯೆ ಕರ್ನಾಟಕ ಸರ್ಕಾರದ ಲಾಂಛನ ಕೆಂಪು ಬಣ್ಣದ ತ್ರಿವರ್ಣ ನಾಡಧ್ವಜವನ್ನ ಬಿಡುಗಡೆ ಮಾಡಿ , ಹಳದಿ ಸಮೃದ್ಧಿಯ ಸಂಕೇತ, ಬಿಳಿ ಶಾಂತಿಯ ಸಂಕೇತ, ಕೆಂಪು ಸ್ವಾಭಿಮಾನ ಹಾಗೂ ಧೈರ್ಯದ ಸಂಕೇತವಾಗಿದೆ ಎಂದರು.
ಇನ್ನು ಸರ್ಕಾರ ಅನುಮೋದನೆ ನೀಡಿರುವ ನಾಡಧ್ವಜಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದ್ದೇ ಆದರೆ ಪ್ರತ್ಯೇಕ ನಾಡಧ್ವಜ ಹೊಂದಿದ ಮೊದಲ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಪಾತ್ರವಾಗಲಿದೆ.